ಬೈಕ್ ಖರೀದಿಗಾಗಿ 25,000 ರೂ.ಗಳ ಸಹಾಯಧನ | ವಿಶ್ವ ಕನ್ನಡಿ

ತುಮಕೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು Zomato, Swiggy, Uber ets, Amazon ಮತ್ತಿತರ ಇ-ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಾದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3ಬಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ)ವರ್ಗಕ್ಕೆ ಸೇರಿದ ಯುವಕರಿಗೆ ಬೈಕ್ ಖರೀದಿಗಾಗಿ ಸಾಲ ಸೌಲಭ್ಯ ಒದಗಿಸಲು ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ನಿಗಮದಿಂದ ಅರ್ಹರಿಗೆ 25,000/-ರೂ.ಗಳ ಸಹಾಯಧನ ಹಾಗೂ ಉಳಿಕೆ ಮೊತ್ತವನ್ನು ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ನೀಡಲಾಗುವುದು. ಸೌಲಭ್ಯ ಪಡೆಯಲಿಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ನಿಗಮದ ವೆಬ್‍ಸೈಟ್ www.dbcdc.karnataka.gov.in ನಿಂದ ಉಚಿತ ಅರ್ಜಿ ಪಡೆದು ಭರ್ತಿ ಮಾಡಿ ಡಿಸೆಂಬರ್ 19ರೊಳಗೆ ಸಲ್ಲಿಸಬಹುದಾಗಿದೆ.

2 thoughts on “ಬೈಕ್ ಖರೀದಿಗಾಗಿ 25,000 ರೂ.ಗಳ ಸಹಾಯಧನ | ವಿಶ್ವ ಕನ್ನಡಿ

Comments are closed.