ಬಿಜೆಪಿಯದ್ದು ಬರಿ ಬೊಗಳೆ: ಮಾಜಿ ಸಚಿವ ಟಿ.ಬಿ.ಜಯಚಂದ್ರ | Vishwa kannadi

ತುಮಕೂರು: ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಟಿಬಿಜೆ, ಶಿರಾ ಉಪಚುನಾವಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾದಿಯಾಗಿ ಬಿಜೆಪಿ ಸಚಿವರು, ಶಾಸಕರು, ಮುಖಂಡರು ನೀಡಿದ ಎಲ್ಲಾ ಭರವಸೆಗಳು ಪೊಳ್ಳು ಎಂಬುದು ಜನತೆಗೆ ಗೊತ್ತಾಗಿದೆ. ಚುನಾವಣೆ ನಡೆದು 9 ತಿಂಗಳು ಕಳೆದರೂ ಮದಲೂರು ಕೆರೆ ತುಂಬಿಲ್ಲ. ಕಾಡುಗೊಲ್ಲರ ಅಭಿವೃದ್ದಿ ನಿಗಮ ಜಾರಿಗೆ ಬಂದಿಲ್ಲ. ಒಳಮೀಸಲಾತಿ ಜಾರಿಯಾಗಿಲ್ಲ. ಕೇವಲ ಸುಳ್ಳು ಭರವಸೆ ನೀಡಿ ಜನರನ್ನು ಮೋಸ ಮಾಡಿದೆ. ಅಲ್ಲದೆ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಮತದಾರರಿಗೆ ಮಂಕುಬೂದಿ ಎರಚಿದೆ. ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಕ್ಷೇತ್ರದ ಜನರು ಮುಂದಿನ ಚುನಾವಣೆಯಲ್ಲಿ ನೀಡಲಿದ್ದಾರೆ ಎಂದು ಟಿ.ಬಿ.ಜಯಚಂದ್ರ ನುಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿರಿಯ ಉಪಾಧ್ಯಕ್ಷ ಹೆಚ್.ಸಿ.ಹನುಮಂತಯ್ಯ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಶಿ ಹುಲಿಕುಂಟೆಮಠ್, ಸಂಜಯ್ ಜಯಚಂದ್ರ, ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಾಧ್ಯಕ್ಷ ಹಾರೋಗೆರೆ ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬರಗೂರು ನಟರಾಜ್, ಪಿ.ಆರ್.ಮಂಜುನಾಥ್, ಸೇರಿದಂತೆ ಹಲವರು ಹಾಜರಿದ್ದರು.

ಇಲ್ಲಿ ಕ್ಲಿಕ್ ಮಾಡಿ ಪೂರ್ತಿ ವಿಡಿಯೋ ನೋಡಿ ಮತ್ತು ರೈಟ್‌ ಸೈಡ್ ಕಾಣುವ ಬೆಲ್ ಬಟನ್ ಕ್ಲಿಕ್ ಮಾಡಿ Subscribe ಆಗಿ

 

 

Leave a Reply

Your email address will not be published. Required fields are marked *