ಕೋವಿಡ್ ನಿರ್ವಹಣೆಯಲ್ಲಿ ದಾನಿಗಳ ಸೇವೆ ಶ್ರೇಷ್ಠವಾದುದು : ಸಿದ್ದಲಿಂಗ ಶ್ರೀ

ಇಲ್ಲಿ ಕ್ಲಿಕ್ ಮಾಡಿ ಪೂರ್ತಿ ವಿಡಿಯೋ ನೋಡಿ ಮತ್ತು ರೈಟ್‌ ಸೈಡ್ ಕಾಣುವ ಬೆಲ್ ಬಟನ್ ಕ್ಲಿಕ್ ಮಾಡಿ Subscribe ಆಗಿ

ತುಮಕೂರು: ಕೊರೋನಾ ನಿರ್ವಹಣೆಯಲ್ಲಿ ದಾನಿಗಳ ನೆರವಿನ ಸೇವಾ ಕೊಡುಗೆಯೂ ಶ್ರೇಷ್ಠವಾದುದು ಎಂದು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ತಿಳಿಸಿದರು.

ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿಂದು ಐಕ್ಯಾಟ್ ಸಂಸ್ಥೆಯಿಂದ ಹಮ್ಮಿಕೊಳ್ಳಲಾಗಿದ್ದ ಆಕ್ಸಿಜನ್ ಲೈನ್ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಐಕ್ಯಾಟ್ ಸಂಸ್ಥೆಯು ಕೊಡುಗೆ ರೂಪದಲ್ಲಿ ಜಿಲ್ಲಾಸ್ಪತ್ರೆಯ 75 ಹಾಸಿಗೆಗಳಿಗೆ ಆಮ್ಲಜನಕ ಕಲ್ಪಿಸಲು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯವಾದುದಸಗಿದೆ ಎಂದರು. ಹಲವು ಸಂಕಷ್ಟದ ನಡುವೆಯೂ ವೈದ್ಯರು ಒಳಗೊಂಡಂತೆ ಎಲ್ಲರ ಸಹಕಾರದಿಂದ ಕೊವೀಡ್ ಎರಡನೇ ಅಲೆ ಗೆದ್ದಿದ್ದೇವೆ. ಈ ಗೆಲುವಿನ ಹಿಂದೆ ದಾನಿಗಳ ನೆರವಿನ ಫಲವೂ ಇದೆ. ಕೋವಿಡ್ ಎರಡನೇ ಅಲೆ ಅಪ್ಪಳಿಸಿದಾಗ ಆಮ್ಲಜನಕದ ಸಮಸ್ಯೆ ಎದುರಾದ ಸಂದರ್ಭದಲ್ಲಿ ಎನ್ ಜಿಒಗಳು ಆಮ್ಲಜನಕ ಸೇರಿದಂತೆ ಇತರೆ ನೆರವನ್ನು ನೀಡಿ ಕೊರೋನಾ ಎದುರಿಸುವಲ್ಲಿ ಸಹಕಾರಿಯಾಗಿದ್ದಾರೆ ಎಂದರು. ಸೋಂಕಿತರ ಆರೈಕೆಗೆ ನಿಂತ ವೈದ್ಯರಂತೆಯೇ ಶುಶ್ರೂಕಿಯರ ಕಾರ್ಯವೂ ಅತ್ಯುತ್ತಮ. ಕಾಣದ ಕೊರೋನಾ ಎಂಬ ಮಹಾಮಾರಿ ವೈರಿ  ವಿರುದ್ಧ ಯಾವುದೇ ಸಿದ್ಧತೆಗಳಿಲ್ಲದೆ  ಯುದ್ದ ಮಾಡಿದ್ದಾರೆ. ಆರೋಗ್ಯವಂತ ಸಮಾಜಕ್ಕೆ ಅವರ ಸೇವೆ ಅಕ್ಷರಶಃ ಸರ್ವಶ್ರೇಷ್ಠವಾದುದಾಗಿದೆ ಎಂದು ಹೇಳಿದರು.

ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಕೊರೋನಾ ನಿರ್ವಹಣೆಗೆ ನೆರವಾಗುವ ಮೂಲಕ ದಾನಿಗಳು  ವಾರಿಯರ್ಸ್ ಗಳಂತೆಯೇ ಸೇವೆ ಸಲ್ಲಿಸಿದ್ದಾರೆ.  ಈ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಯ 75 ಹಾಸಿಗೆಗಳಿಗೆ ಆಮ್ಲಜನಕ ಪೈಪ್ ಲೈನ್ ಕಲ್ಪಿಸುವ ಮೂಲಕ ಐಕ್ಯಾಟ್   ಶ್ಲಾಘನೀಯ ಕೆಲಸ ಮಾಡಿದೆ ಎಂದರು.

ಈ ವೇಳೆ ಜಿಲ್ಲಾ ಸರ್ಜನ್ ಡಾ. ಸುರೇಶ್ ಬಾಬು,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ, ಸ್ಥಾನಿಕ ವೈದ್ಯಾಧಿಕಾರಿ ಡಾ. ವೀಣಾ,  ಕ್ಲೌಡ್  ನೈನ್ ಕ್ಲಿನಕಲ್ ಮುಖ್ಯಸ್ಥ ಡಾ.ನಾಗನಿಶ್ಚಲ್ ಸೇರಿದಂತೆ ಅರ್ಜುನ್ ನಾಗಾರ್ಜುನ್, ಪ್ರತಾಪ್ ಇತರರಿದ್ದರು.