ಕೊರೊನಾ: ಮುನ್ನೆಚ್ಚರಿಕೆ ವಹಿಸಿ ರಾಜ್ಯೋತ್ಸವ ಆಚರಣೆ

ಮಧುಗಿರಿ: ಕೊರೊನಾ ಸೊಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ತಿಳಿಸಿದರು. ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೋನಾ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಅರ್ಥಪೂರ್ಣವಾಗಿ ಹಾಗೂ ಯಾವುದೇ ರೀತಿಯ ಧಕ್ಕೆ ಉಂಟಾಗದ ಹಾಗೆ ಈ ಬಾರಿಯ ನಾಡಹಬ್ಬವನ್ನು ಆಚರಿಸಲಾಗುವುದು ಎಂದರು.

ಕಾರ್ಯಕ್ರಮ ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, 3 ದಿನಗಳ ಮುಂಚಿತವಾಗಿ ಕ್ರೀಡಾಂಗಣ ವನ್ನು ಸ್ವಚ್ಚತೆಗೊಳಿಸಿ ಸ್ಯಾನಿಟೈಸ್ ಮಾಡಲಾಗುವುದು ಎಂದು ತಿಳಿಸಿದರು. ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ್ ಗೌಡ, ಎಇಇ ರಾಮದಾಸ್, ಆಹಾರ ಶಿರಸ್ಥೇದಾರ್ ಗಣೇಶ್, ಉಪನೊಂದಣಾಧಿಕಾರಿ ಗೀತಾ, ಅಬಕಾರಿ ನಿರೀಕ್ಷಕಿ ಶ್ರೀಲತಾ, ಪಶು ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ರೆ.ಮಾ.ನಾಗಭೂಷಣ್,  ನೌಕರರ ಸಂಘದ ಖಜಾಂಚಿ ಚಿಕ್ಕರಂಗಯ್ಯ, ದಲಿತ ಒಕ್ಕೂಟದ ಅಧ್ಯಕ್ಷ ಡಿ.ಟಿ.ಸಂಜೀವಮೂರ್ತಿ, ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಪ್ರಸನ್ನಕುಮಾರ್, ಕಂದಾಯ ಇಲಾಖೆಯ ಸಿದ್ದರಾಜು, ಗೀತಾ, ಸುನೀಲ್, ಕನ್ನಡಪರ ಸಂಘಟನೆಗಳ ಪದಾಧಿಕಾರಿ ಗಳಾದ ತಿಮ್ಮರಾಜು, ರಾಘವೇಂದ್ರ, ಹನುಮಂತರಾಯ  ಹಾಗೂ ಇನ್ನಿತರರು ಇದ್ದರು