ಬೆಂಗಳೂರು: ಆಗ್ನೇಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಚಿದಾನಂದ ಗೌಡರವರು ಇಂದು ನೂತನ ವಿಧಾನಪರಿಷತ್ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಚಿದಾನಂದ M ಗೌಡರವರು ಪ್ರಮಾಣವಚನ ಸ್ವೀಕರಿಸಿದ್ದಾರೆ .ಇನ್ನು ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಕೋಟ ಶ್ರೀನಿವಾಸ ಪೂಜಾರ , ಎಂಎಲ್ ಸಿ Y Aನಾರಾಯಣಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.