ತುಮಕೂರು: ಜಾಗತಿಕ ಮಟ್ಟಕ್ಕೆ ಸರಿಸಮಾನವಾದ ರೀತಿಯಲ್ಲಿ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ‘ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್‍ಸೆಂಟರ್’ ನಲ್ಲಿ ಯಶಸ್ವಿಯಾಗಿ ಓಪನ್ ಹಾರ್ಟ್ ಸರ್ಜರಿಯನ್ನು ಉಚಿತವಾಗಿ ನಡೆಸಲಾಗಿದೆ. ಇದು ಇತಿಹಾಸದಲ್ಲಿ ಹೊಸ ಅಧ್ಯಾಯವನ್ನ ಸೃಷ್ಟಿಸಿದೆ ಎಂದು ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹರ್ಷ ವ್ಯಕ್ತಪಡಿಸಿದ್ದಾರೆ.
ದೇಶದ ಪ್ರತಿಷ್ಠಿತ ಹೃದಯರೋಗ ಸಂಬಂಧಿ ಆಸ್ಪತ್ರೆಗಳ ವೈದ್ಯರು ಮತ್ತು ಮಾಲೀಕರೊಂದಿಗೆ ಸಮಾಲೋಚಿಸಿ ಅವರ ಸಲಹೆಗಳ ಆಧಾರದ ಮೇಲೆ ಬೆಂಗಳೂರಿನ ಕಾರ್ಡಿಯಾಕ್ ಪ್ರಾಂಟಿಡ ನಿರ್ದೇಶಕ ಡಾ. ತಮಿಮ್ ಅಹಮದ್ ನೇತೃತ್ವದ ತಂಡದೊಂದಿಗೆ ಪರಸ್ಪರ ಸಹಕಾರದಿಂದ ಆಸ್ಪತ್ರೆಯಲ್ಲಿ ಹಾರ್ಟ್ ಸೆಂಟರ್ ಆರಂಭಿಸಲಾಯಿತು. ಸುಮಾರು 16 ಕೋಟಿ ವೆಚ್ಚದಲ್ಲಿ ಸಂಸ್ಥೆ ಪ್ರಾರಂಭ ಮಾಡಿದ್ದು, ಸಂಸ್ಥೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಗುರಿ ಹೊಂದಿದ್ದೇವೆ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದರು.
ಸರ್ಕಾರದ ಸೇವೆಗಳಿಗೂ ಒತ್ತು:
ಗ್ರಾಮಾಂತರ ಪ್ರದೇಶದ ಬಡವರ್ಗವನ್ನು ಪರಿಗಣಿಸಿ ಸರ್ಕಾರದ ಆರೋಗ್ಯ ಸೇವೆಗಳನ್ನು ಆಸ್ಪತ್ರೆಯಲ್ಲಿ ನೀಡಲು ನಿರ್ಧರಿಸಲಾಗಿದೆ. ಬಿ.ಪಿ.ಎಲ್, ಆಯುಷ್ಮನ್‍ಕಾರ್ಡ್ ಹೊಂದಿರುವ ಸಾವಿರಾರು ರೋಗಿಗಳಿಗೆ ಉಚಿತವಾಗಿ ಸೇವೆ ನೀಡಲಾಗಿದೆ. ಮುಂದೆ ಖಾಸಗಿ ಸಂಸ್ಥೆಗಳ ನೌಕರರು ಹಾಗೂ ಆರೋಗ್ಯ ವಿಮೆ ಹೊಂದಿರುವವರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಚಿಂತಿಸಲಾಗುತ್ತಿದೆ. ಸಂಸ್ಥೆಯಲ್ಲಿ ಬಡಜನರಿಗೆ ಅವರ ಅನುಕೂಲಕ್ಕೆ ತಕ್ಕಂತೆ ಸಬ್ಸಿಡಿ ದರದಲ್ಲಿ ಸೇವೆಗಳನ್ನು ನೀಡಲಾಗುವುದು ಎಂದು ತಮ್ಮ ಸಂಸ್ಥೆಯ ಗ್ರಾಮಾಂತರ ಆರೋಗ್ಯ ಸೇವೆಯ ಗುರಿಯನ್ನುಅವರು ತೆರೆದಿಟ್ಟರು.
ಸಿದ್ಧಾರ್ಥ ಆಸ್ಪತ್ರೆ ಮತ್ತುಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ದೇವದಾಸ್, ಪ್ರಾಂಶುಪಾಲರಾದ ಡಾ.ಶ್ರೀನಿವಾಸ್ ಮೂರ್ತಿ, ಅಡ್ವಾನ್ಸ್ಡ್ ಹಾರ್ಟ್ ಸೆಂಟರ್‍ನ ಮುಖ್ಯ ಕಾರ್ಯನಿರ್ವಾಹಕ ವೈದ್ಯಾಧಿಕಾರಿ ಡಾ.ಪ್ರಭಾಕರ್ ಹಾಗೂ ವೈದ್ಯರ ತಂಡ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಈ ಸಂಭದಪಟ್ಟಂತೆ ಇಲ್ಲಿ ಪೂರ್ತಿ ವಿಡೀಯೊ ಇದೆ ನೋಡಿ ಹಾಗೆ ಈ ಕೆಳಗೆ ಕಾಣುವ ಲಿಂಕ್ ನ ಕ್ಲಿಕ್ ಮಾಡಿ ಪೇಸ್ಬುಕ್ ಪೇಜ್ ಫಾಲೊ ಮಾಡಿ
https://www.facebook.com/vishwakannadinews