ಚುನಾವಣೆ ನಂತರ ಶಿರಾ ತಾಲ್ಲೂಕಿನಲ್ಲಿ ರ್ಯಾಂಡಮ್ ಕೊರೋನಾ ಟೆಸ್ಟ್: ಶುಭಾ ಕಲ್ಯಾಣ್

ತುಮಕೂರು; ಶಿರಾ ಉಪ ಚುನಾವಣಾ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ತಾಲ್ಲೂಕಿನ ಶೇ. 20ರಷ್ಟು ಮಂದಿಗೆ ರ್ಯಾಂಡಮ್ ಆಗಿ ಕೋವಿಡ್ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಶುಭಾ ಕಲ್ಯಾಣ್ ತಿಳಿಸಿದರು.  ಇದರಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಿರುವ ಅಧಿಕಾರಿ/ ಸಿಬ್ಬಂದಿ ಹಾಗೂ ತಾಲ್ಲೂಕಿನ ಜನರನ್ನೊಳಗೊಳ್ಳಲಿದ್ದು, ನವೆಂಬರ್ 4ರ ನಂತರ ಕೋವಿಡ್ ಪರೀಕ್ಷೆಯನ್ನು ಆರಂಭಿಸಲಾಗುವುದು.

ಮತದಾನದ ದಿನ ಮತಗಟ್ಟೆಯಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು ಕಡ್ಡಾಯ. ಪ್ರತಿ ಮತಗಟ್ಟೆಯಲ್ಲಿ ಸ್ಯಾನಿಟೈಸರ್, ಹಾಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿರುತ್ತದೆ, ಥರ್ಮಲ್ ಸ್ಕ್ರೀನಿಂಗ್ ವೇಳೆ ತಾಪಮಾನ 99.5ಗಿಂತ ಹೆಚ್ಚಾಗಿದ್ದರೆ ಮತದಾನದ ಕೊನೆಯ ಒಂದು ಗಂಟೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ, ಪ್ರತಿ ಮತಗಟ್ಟೆಗೆ ಒಂಬರಂತೆ ಆಶಾಕಾರ್ಯಕರ್ತೆ, ಅಂಗನವಾಡಿ ಸಿಬ್ಬಂದಿ ಅಥವಾ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜನೆ ಮಾಡಿರುತ್ತವೆ ಎಂದು ಅವರು ತಿಳಿಸಿದರು.