ತುಮಕೂರು:ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪೋಸ್ಟರ್‍ನ್ನು ಕೇಂದ್ರ ಚುನಾವಣಾ ಸಾಮಾನ್ಯ ವೀಕ್ಷಕರಾದ ಬಿ. ಮಹೇಶ್ವರಿ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೊನ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಚುನಾವಣಾಧಿಕಾರಿ ಡಾ: ಕೆ. ನಂದಿನಿದೇವಿ ಮತ್ತಿತರರು ಹಾಜರಿದ್ದರು.