ಉಪ ಚುನಾವಣೆ ಮತ ಎಣಿಕೆ: ನಾಳೆ ಮದ್ಯ ಮಾರಾಟ ನಿಷೇಧ

ತುಮಕೂರು: ಶಿರಾ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯವು ನವೆಂಬರ್ 10ರಂದು ತುಮಕೂರು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ದಿನದಂದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ನವೆಂಬರ್ 10ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಶಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ತುಮಕೂರಿನ ಮತ ಎಣಿಕೆ ಕೇಂದ್ರದ 500 ಮೀಟರ್ ಸುತ್ತಳತೆಯಲ್ಲಿ ಜಾರಿಗೆ ಬರುವಂತೆ ಎಲ್ಲಾ ಮದ್ಯದಂಗಡಿಗಳನ್ನು(ಕೆಎಸ್‍ಬಿಸಿಎಲ್ ಡಿಪೋಗಳನ್ನು ಹೊರತುಪಡಿಸಿ) ಮುಚ್ಚಿಸಿ ಮದ್ಯ ಮಾರಾಟ, ಹಂಚಿಕೆ, ಶೇಖರಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಆದೇಶಿಸಿದ್ದಾರೆ.