ಉಪಚುನಾವಣೆ: ಬಿಜೆಪಿ ಸವಾಲಾಗಿ ಸ್ವೀಕರಿಸಿದೆ

ತುಮಕೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಬಿಜೆಪಿ ಪಕ್ಷ ಸವಾಲಾಗಿ ಸ್ವೀಕರಿಸಿದ್ದು, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ,ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಬಾರಿ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಅವರು ಗೆಲುವು ಸಾಧಿಸಿದ್ದರೂ ಅಭಿವೃದ್ದಿ ಎಂಬುದು ಕುಂಠಿತವಾಗಿದೆ.ಕುಡಿಯುವ ನೀರು, ರಸ್ತೆಯಂತಹ ಮೂಲಭೂತ ಸೌಕರ್ಯಗಳು ಇಂದಿಗೂ ಮರೀಚಿಕೆಯಾಗಿವೆ. ಹಾಗಾಗಿ ಜನತೆ ಬದಲಾವಣೆ ಬಯಸಿದ್ದು, ಈ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿ ರಾಜೇಶಗೌಡ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಲಿದೆ ಎಂದರು. ಕಾಂಗ್ರೆಸ್ ಮತ್ತು ಜೆಡಿಎಸ್ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರುದ್ದ ಅಪಪ್ರಚಾರದಲ್ಲಿ ತೊಡಗಿವೆ.ಹಣ, ಹೆಂಡ ಹಂಚುವ ಸಂಸ್ಕøತಿ ನಮ್ಮದಲ್ಲ.

ಅದು ಕಾಂಗ್ರೆಸ್ ಪಕ್ಷದ್ದು, ನಮ್ಮದೆನಿದ್ದರೂ ಸಂಘಟನೆ ಮತ್ತು ಅಭಿವೃದ್ದಿ ಆಧಾರದಲ್ಲಿ ಮತ ಕೇಳುತ್ತವೆ.ಅಡ್ಡದಾರಿ ಹಿಡಿಯುವುದಿಲ್ಲ. ನೀರಾವರಿ ಹೆಚ್ಚಿನ ಅದ್ಯತೆಯನ್ನು ಪಕ್ಷ ನೀಡಲಿದೆ ಎಂದು ರೇಣುಕಾಚಾರ್ಯ ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಪರಸ್ವರ ಕಾಲೇಳೆಯುವ ಕೆಲಸ ನಡೆಯುತ್ತಿದೆ. ಶಿರಾಗೆ ಸಿದ್ದರಾಮಯ್ಯ ಅಭ್ಯರ್ಥಿ, ಆರ್.ಆರ್.ನಗರಕ್ಕೆ ಡಿಕೆಶಿ ಅಭ್ಯರ್ಥಿ ಎಂಬಂತಾಗಿದೆ. ಇಬ್ಬರು ಒಗ್ಗೂಡಿ ಕೆಲಸ ಮಾಡುತ್ತಿಲ್ಲ. ಆದರೆ ಬಿಜೆಪಿಯಲ್ಲಿ ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಪಕ್ಷದ ಪ್ರಮುಖ ನಾಯಕರವರೆಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಿದ್ದೇವೆ. ಇದು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಲಿದೆ. ಜೆಡಿಎಸ್ ಪಕ್ಷ ಅನುಕಂಪದ ಆಧಾರದಲ್ಲಿ ಮತ ಕೇಳುತ್ತಿದೆ. ಆದರೆ ಅದು ಕ್ಷೇತ್ರದಲ್ಲಿ ಕಂಡು ಬರುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಮತದಾರರು ತಿರಸ್ಕರಿಸಲಿದ್ದಾರೆ ಎಂದು  ರೇಣುಕಾಚಾರ್ಯ ಭವಿಷ್ಯ ನುಡಿದರು. ಈ ವೇಳೆ ಪಕ್ಷದ ಮುಖಂಡರಾದ ಎಂ.ಬಿ.ನಂದೀಶ್,ಸತೀಶ್,ಶಿವಣ್ಣ, ಮಹೇಶ್ ಮತ್ತಿತರರು ಉಪಸ್ಥಿತರಿದ್ದರೆ

error: Content is protected !!