ಅಭಿವೃದ್ದಿ ಶೀಲ ಸರಕಾರಕ್ಕಾಗಿ ಕಾಂಗ್ರೆಸ್ಗೆ ಮತ: ಡಿಕೆ ಶಿವಕುಮಾರ್

ತುಮಕೂರು: ರಾಜ್ಯದಲ್ಲಿ ಅಭಿವೃದ್ಧಿ ಶೀಲ ಸರಕಾರಕ್ಕಾಗಿ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರನ್ನು ಆಶೀರ್ವದಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾರರಲ್ಲಿ ಮನವಿ ಮಾಡಿದ್ದಾರೆ. ಸಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಹಿಂದೆ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ದು ಜನರಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಮಾಡಿದ್ದೆವು. ಹಾಗೆಯೇ ಸಿರಾ ಕ್ಷೇತ್ರದಲ್ಲೂ ಅಭಿವೃದ್ಧಿಯ ಮಹಾಪೂರವೇ ಹರಿದಿತ್ತು.ಮತ್ತೆ ಸಿರಾದಲ್ಲೂ ಅಭಿವೃದ್ಧಿ ಕಾರ್ಯಗಳು ಚುರುಕಾಗಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಅವರು ಮತದಾರರಲ್ಲಿ ಕೋರಿದರು.  ಕ್ಷೇತ್ರದ ಮತದಾರರು ತೋರಿಸುತ್ತಿರುವ ಉತ್ಸಾಹ,ವಿಶ್ವಾಸ ಈ ಚುನಾವಣೆಯ ಫಲಿತಾಂಶ ಹೇಗಿರುತ್ತದೆ ಎಂಬುದರ ಪ್ರತೀಕವಾಗಿದೆ.ಟಿ.ಬಿ.ಜಯಚಂದ್ರ ಅವರು ರಾಜ್ಯದ ಹಿರಿಯ ನಾಯಕ,ಅನುಭವಿಗಳಾಗಿದ್ದಾರೆ.ಈ ಹಿಂದೆ ಅವರು ಶಾಸಕರಾಗಿದ್ದಾಗ ಸಿರಾ ಕ್ಷೇತ್ರಕ್ಕೆ ಸುಮಾರು ಎರಡೂವರೆ ಕೋಟಿ ರೂ. ಅನುದಾನ ತಂದು ಕಂಕಣ ತೊಟ್ಟು ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ಇದಕ್ಕೆ ಇಲ್ಲಿನ ಹೊಸ ಹೊಸ ಸರಕಾರಿ ಕಟ್ಟಡಗಳೇ ಸಾಕ್ಷಿ ಎಂದರು.

ಉಪಚುನಾವಣೆ ಬೇಕು ಎಂದು ಯಾರೂ ಬಯಸಿರಲಿಲ್ಲ. ಸತ್ಯನಾರಾಯಣ ಅವರೇ ಇದು ನನ್ನ ಕೊನೆ ಚುನಾವಣೆ ಎಂದು ಮತದಾರರಲ್ಲಿ ಮನವಿ ಮಾಡಿದ್ದರಿಂದ ನಾವು ಸೋಲನುಭವಿಸಬೇಕಾಯಿತು. ಆದರೆ ಈ ಬಾರಿ ಸಿರಾ ಮತದಾರರ ಬಗ್ಗೆ ನಮಗೆ ನಂಬಿಕೆ ಇದೆ.ರಾಜ್ಯದಲ್ಲಿ ಮತ್ತೆ ಅಭಿವೃದ್ಧಿ ಶೀಲ, ಸಮೃದ್ಧಿ ಕರ್ನಾಟಕ ನಿರ್ಮಾಣ ಮಾಡಲು ಜನರ ವಿಶ್ವಾಸವನ್ನು ಪಡೆಯಲು ನಾವು ಬಂದಿದ್ದೇವೆ. ಜನರು ಈ ಚುನಾವಣೆ ಫಲಿತಾಂಶದ ಮುಖಾಂತರ ಈ ಸರಕಾರದ ಆಡಳಿತ ಸರಿಯಿಲ್ಲ ಎಂಬುದನ್ನು ತಿಳಿಸಬೇಕು. ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರಿಗೆ ಆಶೀರ್ವಾದ ಮಾಡಬೇಕು. ಈ ರಾಜ್ಯದಲ್ಲಿ ಶಾಂತಿ ಕಾಪಾಡುವ ಜತೆಗೆ ಮತ್ತೆ ಉತ್ತಮವಾದ ಸ್ಥಿತಿಗೆ ಕೊಂಡೊಯ್ಯಬೇಕು. ವಿಶೇಷವಾಗಿ ಮಹಿಳೆಯರು, ವೃದ್ಧರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಕಾಂಗ್ರೆಸ್ ಪಕ್ಷ ಋಣಿಯಾಗಿರಲಿದೆ ಎಂದು ಅವರು ಹೇಳಿದರು. ಕಳೆದ ಬಾರಿ ಅಂದರೆ 2013 ರಿಂದ 2018ರವರಗೆ ರಾಜ್ಯಕ್ಕೆ ಅಭಿವೃದ್ಧಿಶೀಲ ಸರಕಾರವನ್ನು ಕೊಟ್ಟಿದ್ದೆವು.ಅಭಿವೃದ್ಧಿ ಹೇಗಿರುತ್ತದೆ ಎಂಬುದನ್ನು ಕಳೆದ ಕಾಂಗ್ರೆಸ್ ಸರಕಾರದಲ್ಲಿ ಕೆಲಸ ಮಾಡುವ ಮೂಲಕ ತೋರಿಸಿದ್ದೇವೆ. ನಿರುದ್ಯೋಗ ಸಮಸ್ಯೆ, ಮಹಿಳೆಯರು, ವೃದ್ಧರು ಸೇರಿದಂತೆ ಎಲ್ಲ ವರ್ಗದವರಿಗೂ ವಿಶೇಷ ಒತ್ತು ನೀಡಿದ್ದೇವೆ ಎಂದ ಅವರು, ಶಾಂತಿ, ನೆಮ್ಮದಿ ಮತ್ತು ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದರು.  ಕೋವಿಡ್ ವಿಚಾರದಲ್ಲಿ ರಾಜ್ಯ ಸರಕಾರವನ್ನು ಭ್ರμÁ್ಟಚಾರ ನಡೆಸಿದೆ. ಸುಮಾರು 2 ಸಾವಿರ ಕೋಟಿ ರೂ.ಗಳಷ್ಟು ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ಈ ಬಗ್ಗೆ ನಾನು ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಧ್ವನಿ ಎತ್ತಿದ್ದೇವೆ ಎಂದರು.  ರಾಜ್ಯದಲ್ಲಿ ಜನ ವಿರೋಧಿ, ನಿಷ್ಕ್ರೀಯ ಹಾಗೂ ಲೂಟಿ ಹೊಡೆಯುವ ಸರಕಾರ ಇದೆ. ಈ ಉಪಚುನಾವಣೆ ಭ್ರಷ್ಟ ಸರಕಾರಕ್ಕೆ ಎಚ್ಚರಿಕೆಯ ಗಂಟೆಯಾಗಬೇಕು.ಈ ನಿಟ್ಟಿನಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರು ರಾಜ್ಯದ ನಿಷ್ಕ್ರೀಯ ಸರಕಾರದ ವಿರುದ್ಧ ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಅವರು ಕರೆ ನೀಡಿದರು.  ರಾಜ್ಯದಲ್ಲಿ ಭ್ರμÁ್ಟಚಾರ ಮಿತಿ ಮೀರಿದ್ದು, ಮುಂದಿನ ದಿನಗಳಲ್ಲಿ ಈ ಲೂಟಿಕೋರ     ಸರಕಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಈ ಉಪಚುನಾವಣೆಯಲ್ಲಿ ಮತದಾರರು ಎಚ್ಚರಿಕೆ ವಹಿಸಬೇಕು.ಇದು ಸಾರ್ವತ್ರಿಕ ಚುನಾವಣೆಯಲ್ಲ, ಉಪಚುನಾವಣೆ. ಹಾಗಾಗಿ ಜನರು ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು.ಕಳೆದ ಬಾರಿ ಜಯಚಂದ್ರ ಅವರು ಸ್ವಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದರು.ಮತ್ತೆ ಅವರನ್ನೆ ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದ್ದು,ಈ ಉಪಚುನಾವಣೆಯಲ್ಲಿ ಮತದಾರರು ಅವರ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.  2013 ರಿಂದ 2018ರ ಅವಧಿಯಲ್ಲಿ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿದ್ದ ಟಿ.ಬಿ. ಜಯಚಂದ್ರ ಅವರು ಸಿರಾ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ದಿಗೆ ಹಗಲಿರುಳು ಶ್ರಮ ವಹಿಸಿ ಕೆಲಸ ಮಾಡಿದ್ದಾರೆ.ಆ ಆಧಾರದ ಮೇಲೆ ಇಂದು ಮತಯಾಚಿಸುತ್ತೇವೆ. ಸುಮಾರು ಎರಡೂವರೆ ಸಾವಿರ ಕೋಟಿ ರೂ. ಅನುದಾನವನ್ನು ಸಿರಾ ಕ್ಷೇತ್ರಕ್ಕೆ ತಂದು ಸಂಪೂರ್ಣ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು.ಆದರೆ ಚುನಾವಣೆಯಲ್ಲಿ ಜನತೆ ಸೋಲಿಸಿದ್ದರಿಂದ ಅಭಿವೃದ್ಧಿ ಅರ್ಧಕ್ಕೆ ಮೊಟಕು ಗೊಂಡಿದೆ. ಕಂಠಿತವಾಗಿರುವ ಅಭಿವೃದ್ಧಿ ಕಾರ್ಯಗಳು ವೇಗ ಪಡೆಯಲು ಜಯಚಂದ್ರರವರನ್ನು ಗೆಲ್ಲಿಸಬೇಕು.ಸಿರಾ ಜನತೆಯೂ ವಿವೇಚನೆಯಿಂದ ಮತ ಕೊಡುವ ಕೆಲಸ ಮಾಡಲಿದ್ದಾರೆ.ಹಿಂದೆ ಆಗಿರುವಂತಹ ಅಭಿವೃದ್ಧಿ ಕಾರ್ಯಗಳನ್ನು ಮತದಾರರು ನೆನಪಿಸಿಕೊಂಡು ಈ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ತಮಗಿದೆ ಎಂದರು. ಈ ಉಪಚುನಾವಣೆಯ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಾಗಲಿದೆ. ಸಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ಸಿದ್ದರಾಮಯ್ಯ ನುಡಿದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಅಭ್ಯರ್ಥಿ ಟಿ.ಬಿ. ಜಯಚಂದ್ರ, ಮಾಜಿ ಶಾಸಕ ಕೆ.ಎನ್. ರಾಜಣ್ಣ, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.