ತುಮಕೂರು: ಆಗ್ನೇಯ ಪದವೀಧರ ಕ್ಷೇತ್ರದ ನಿರುದ್ಯೋಗಿ ಪದವೀಧರರು, ಪದವೀಧರ ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂಧಿಸಿ ಕೆಲಸ ಮಾಡುವ ಆಶಯದೊಂದಿಗೆ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಮತದಾರರು ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಬೆಂಬಲಿಸುವಂತೆ ಡಿ.ಟಿ.ಶ್ರೀನಿವಾಸ್ ಮನವಿ ಮಾಡಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಡ ರೈತ ಕುಟುಂಬದಿಂದ ಬಂದ ನಾನು ಸರ್ಕಾರಿ ಶಾಲೆಯಲ್ಲಿ ಓದಿ, ಹಂತ ಹಂತವಾಗಿ ಉನ್ನತ ವಿದ್ಯಾಭ್ಯಾಸ ಮಾಡಿ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‍ಪೆಕ್ಟರ್ ಆಗಿ ಉತ್ತಮ ಕಾರ್ಯನಿರ್ವಹಿಸಿ ಆನಂತರ ಕೆ.ಎ.ಎಸ್. ಅಧಿಕಾರಿಯಾಗಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವಾರು ವರ್ಷ ಕಾರ್ಯನಿರ್ವಹಿ ಸಿದ್ದು, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಇಲಾಖೆಗಳ ಪ್ರಧಾನ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದರು. ಸಮಸ್ಯೆಗಳಿಗೆ ಸ್ಪಂಧಿಸಿದ ತೃಪ್ತಿ: ಕಳೆದ 10 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ಸಕ್ರಿ ಯನಾಗಿ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳ 32 ತಾಲ್ಲೂಕುಗಳಿಗೆ ಭೇಟಿ ನೀಡಿ ನಿರುದ್ಯೋಗಿ ಪದವೀಧರರ, ಪದವೀಧರ ಶಿಕ್ಷಕರ, ಉಪನ್ಯಾಸಕರ, ವ್ಯಾಪಾರಿಗಳು, ವಕೀಲರು, ಇಂಜಿನಿಯರುಗಳು, ಕೃಷಿಕ ಪದವೀಧರರ ಜೊತೆ ನಿರಂತರ ಸಂಪರ್ಕ ಹೊಂದಿದ್ದು, ಅವರ ಸಮಸ್ಯೆಗಳಿಗೆ ಸ್ಪಂಧಿಸಿದ್ದೇನೆ ಎಂದು ತಿಳಿಸಿದರು. ಸೇವೆ ಮಾಡುವ ಉದ್ಧೇಶ: ನಾನು ಎಂಜಿನಿಯರ್ ಪದವೀಧರನಾಗಿದ್ದು, ಪೆÇಲೀಸ್ ಅಧಿಕಾರಿ, ಕೆಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಎಸ್.ಇ.ಎ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. ಸುಮಾರು 8000 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ಬಡ ಜನರಿಗೆ, ಯುವಕರಿಗೆ ಹೆಚ್ಚಿನ ಅನುಕೂಲ ಸೇವೆ ಮಾಡುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದರು. ನಿರುದ್ಯೋಗ ಸಮಸ್ಯೆಗೆ ಸ್ಪಂಧಿಸಿದ್ದೇನೆ: ಪದವೀಧರರ ನಿರುದ್ಯೋಗ ನಿರ್ಮೂಲನೆ ಮಾಡಲು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನಲ್ಲಿ ರಾಜ್ಯದ ಪ್ರತಿಷ್ಠಿತ ಐಟಿ, ಬಿಟಿ ಕಂಪನಿಗಳ ಮುಖ್ಯಸ್ಥರನ್ನು ಆಹ್ವಾನಿಸಿ ಬೃಹತ್ ಉದ್ಯೋಗಮೇಳ ಆಯೋಜಿಸಿ ಸುಮಾರು 1500ಕ್ಕೂ ಹೆಚ್ಚು ಪದವೀಧರರಿ ಗೆ ಉದ್ಯೋಗ ಕಲ್ಪಿಸಿರುವುದಾಗಿ ಹೇಳಿದರು. ಉನ್ನತ ವ್ಯಾಸಂಗಕ್ಕೆ ಸಹಾಯ: ಅಂಗವಿಕಲರಿಗೆ ವಿಶೇಷ ಉದ್ಯೋಗಮೇಳೆ ಆಯೋಜಿಸಿ ಉದ್ಯೋಗ ಕಲ್ಪಿಸಿದ್ದೇನೆ, ಉನ್ನತ ವ್ಯಾಸಂಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಮತ್ತು ವಕೀಲರಿಗೆ ಶಿಷ್ಯ ವೇತನ ಕೊಡಿಸಿದ್ದು, ಎಂ.ಟೆಕ್.ನಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ನನ್ನ ಸ್ವಂತ ಖರ್ಚಿನಲ್ಲಿ ಐಎಎಸ್, ಐಪಿಎಸ್, ಐಎಫ್‍ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಪ್ರತಿವರ್ಷ ದೆಹಲಿಗೆ ಕಳುಹಿಸುತ್ತಿದ್ದೇನೆ ಎಂದರು. ನಿರುದ್ಯೋಗಿ ಪದವೀಧರರು, ಪದವೀಧರ ಶಿಕ್ಷಕರು, ಉಪನ್ಯಾಸಕರು, ವಕೀಲರು, ಕೃಷಿಕ ಪದವೀಧರರ ಏನೇ ಸಮಸ್ಯೆ ಇದ್ದರೂ ಆ ಸಮಸ್ಯೆಗಳಿಗೆ ಸ್ಪಂಧಿಸಿ ಕೆಲಸ ಮಾಡುವುದಾಗಿ ಡಿ.ಟಿ.ಶ್ರೀನಿವಾಸ್ ಭರವಸೆ ನೀಡಿದರು. ಗೆಲ್ಲುವ ವಿಶ್ವಾಸ: ಕಳೆದ ಒಂದೂವರೆ ವರ್ಷದಿಂದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ನಡೆಸಿದ್ದು, ಕ್ಷೇತ್ರದ 32 ತಾಲ್ಲೂಕುಗಳಲ್ಲೂ ಒಂದೊಂದು ತಂಡವನ್ನು ರಚನೆ ಮಾಡಿ ಸುಮಾರು, 46 ಸಾವಿರ ಪದವೀಧರರನ್ನು ನೋಂದಣಿ ಮಾಡಿಸಲಾಗಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡಿದ್ದು, ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದೆ. ಜಾತಿ ಮೀರಿ ಎಲ್ಲರೂ ಪಕ್ಷಾತೀತವಾಗಿ ನನಗೆ ಸಹಕಾರ ನೀಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಹುಚ್ಚಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಗ್ಗೇಶ್, ತುಮಕೂರು ವಿವಿಯ ಡಿ.ಎಡ್ ಅಸೋಸಿಯೇಷನ್‍ನ ಕುಮಾರಸ್ವಾಮಿ, ಸಹಾಯಕ ಪ್ರಾಧ್ಯಾಪಕ ಮಾರುತಿ, ಮುಖ್ಯ ಶಿಕ್ಷಕ ನರಸಿಂಹಯ್ಯ, ಮುದ್ದುರಾಜ್, ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ನಾಗಣ್ಣ, ಶಿವಲಿಂಗಯ್ಯ ಪ್ರಾಂಶುಪಾಲರು, ಉಪನ್ಯಾಸಕರು ಸೇರಿದಂತೆ ಹಲವರು ಭಾಗವಹಿಸಿದ್ದರು.